Bhagya Shilpigalu Notes ,Question Answer Pdf Download 2023, 10ನೇ ತರಗತಿ ಕನ್ನಡ ಭಾಗ್ಯಶಿಲ್ಪಿಗಳು ನೋಟ್ಸ್ 10th standard Kannada bhagya shilpi question answer
ತರಗತಿ : 10ನೇ ತರಗತಿ
ಪಾಠದ ಹೆಸರು : ಭಾಗ್ಯಶಿಲ್ಪಿಗಳು
ಕೃತಿಕಾರರ ಹೆಸರು : ಡಿ.ಎಸ್.ಜಯಪ್ಪಗೌಡ
Table of Contents
10th bhagya shilpigalu kannada question and answer
ಲೇಖಕರ ಪರಿಚಯ :
ಡಿ.ಎಸ್.ಜಯಪ್ಪಗೌಡ
ಡಿ . ಎಸ್ . ಜಯಪ್ಪಗೌಡ ( ೧೯೪೭ ) ಇವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯವರು . ದಾರದಹಳ್ಳಿ ಸುಬ್ಬೇಗೌಡ ಜಯಪ್ಪಗೌಡ ಎಂಬುದು ಇವರ ಪೂರ್ಣಹೆಸರು . ಕರ್ನಾಟಕ ಗ್ರಾಮೀಣ ಸಂಸ್ಥೆಗಳು , ಕರ್ನಾಟಕದ ಕಡಲಾಚೆಯ ಸಂಪರ್ಕಗಳು , ಮೈಸೂರು ಒಡೆಯರು . ಜನಪದ ಆಟಗಳು , ದಿವಾನ್ ಸರ್ ಎಂ . ವಿಶ್ವೇಶ್ವರಯ್ಯನವರ ಕಾರ್ಯಸಾಧನೆಗಳು ಶ್ರೀಯುತರ ಪ್ರಮುಖ ಕೃತಿಗಳು , ಕರ್ನಾಟಕದ ಕಡಲಾಚೆಯ ಸಂಪರ್ಕಗಳು ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ . ಧಾರವಾಡ ಕರ್ನಾಟಕ ಸಂಘದ ಸಂಶೋಧನಾ ಬಹುಮಾನಕ್ಕೆ ಭಾಜನರಾಗಿದ್ದಾರೆ .
Bhagya Shilpigalu Notes Question Answer
ಅ ) ಕೊಟ್ಟಿರುವ ಪ್ರಶ್ನೆಗಳಿಗೆ ಒಂದೊಂದು ವಾಕ್ಯದಲ್ಲಿ ಉತ್ತರಿಸಿ .
1. ಏಷ್ಯಾ ಖಂಡದಲ್ಲಿಯೇ ಮೊದಲು ಪ್ರಾರಂಭಿಸಿದ ಜಲ ವಿದ್ಯುತ್ ಯೋಜನೆ ಯಾವುದು ?
ಉ : ಶಿವನಸಮುದ್ರದ ಬಳಿ ಕಾವೇರಿ ನದಿಯ ಜಲವಿದ್ಯುತ್ ಯೋಜನೆ ವಿಷ್ಯಾ ಖಂಡದಲ್ಲಿಯೇ ಮೊದಲು ಪ್ರಾರಂಭಿಸಿದ ಜಲ ವಿದ್ಯುತ್ ಯೋಜನೆಯಾಗಿದೆ .
2. ಬ್ರಿಟಿಷ್ ಸರ್ಕಾರ ವಿಶ್ವೇಶ್ವರಯ್ಯ ಅವರಿಗೆ ಯಾವ ಪದವಿಯನ್ನು ನೀಡಿ ಗೌರವಿಸಿತು ?
ಉ : ಬ್ರಿಟಿಷ್ ಸರ್ಕಾರ ವಿಶ್ವೇಶ್ವರಯ್ಯ ಅವರಿಗೆ ಸರ್ ಪದವಿಯನ್ನು ನೀಡಿ ಗೌರವಿಸಿತು .
3. ನಾಲ್ವಡಿ ಕೃಷ್ಣರಾಜ ಒಡೆಯರು ಯಾವಾಗ ಪಟ್ಟಾಭಿಷಿಕ್ತರಾದರು ?
ಉ : ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ ರಲ್ಲಿ ಪಟ್ಟಾಭಿಷಿಕ್ತರಾದರು .
4. ನಾಲ್ವಡಿ ಕೃಷ್ಣರಾಜ ಒಡೆಯರು ಯಾವುದಕ್ಕಾಗಿ ಕಂಕಣಬದ್ಧರಾದರು ?
ಉ : ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯದ ಸರ್ವೋತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾದರು
5. ವಿಶ್ವೇಶ್ವರಯ್ಯ ಅವರನ್ನು ದಿವಾನರಾಗಿ ನೇಮಿಸಿದವರು ಯಾರು ?
ಉ : ವಿಶ್ವೇಶ್ವರಯ್ಯ ಅವರನ್ನು ದಿವಾನರಾಗಿ ನೇಮಿಸಿದವರು ನಾಲ್ವಡಿ ಕೃಷ್ಣರಾಜ ಒಡೆಯರ್ ,
6. ವಿಶ್ವೇಶ್ವರಯ್ಯ ಅವರ ಹುಟ್ಟು ಹಬ್ಬದ ನೆನಪಿಗಾಗಿ ಯಾವ ದಿನಾಚರಣೆಯನ್ನು ಮಾಡಲಾಗುತ್ತಿದೆ ?
ಉ : ವಿಶ್ವೇಶ್ವರಯ್ಯ ಅವರ ಹುಟ್ಟು ಹಬ್ಬದ ನೆನಪಿಗಾಗಿ ಎಂಜಿನಿಯರ್ ದಿನಾಚರಣೆಯನ್ನು ಮಾಡಲಾಗುತ್ತಿದೆ .
1. ಏಷ್ಯಾ ಖಂಡದಲ್ಲಿಯೇ ಮೊದಲು ಪ್ರಾರಂಭಿಸಿದ ಜಲ ವಿದ್ಯುತ್ ಯೋಜನೆ ಯಾವುದು ?
ಉ : ಶಿವನಸಮುದ್ರದ ಬಳಿ ಕಾವೇರಿ ನದಿಯ ಜಲವಿದ್ಯುತ್ ಯೋಜನೆ ವಿಷ್ಯಾ ಖಂಡದಲ್ಲಿಯೇ ಮೊದಲು ಪ್ರಾರಂಭಿಸಿದ ಜಲ ವಿದ್ಯುತ್ ಯೋಜನೆಯಾಗಿದೆ .
2. ಬ್ರಿಟಿಷ್ ಸರ್ಕಾರ ವಿಶ್ವೇಶ್ವರಯ್ಯ ಅವರಿಗೆ ಯಾವ ಪದವಿಯನ್ನು ನೀಡಿ ಗೌರವಿಸಿತು ?
ಉ : ಬ್ರಿಟಿಷ್ ಸರ್ಕಾರ ವಿಶ್ವೇಶ್ವರಯ್ಯ ಅವರಿಗೆ ಸರ್ ಪದವಿಯನ್ನು ನೀಡಿ ಗೌರವಿಸಿತು .
3. ನಾಲ್ವಡಿ ಕೃಷ್ಣರಾಜ ಒಡೆಯರು ಯಾವಾಗ ಪಟ್ಟಾಭಿಷಿಕ್ತರಾದರು ?
ಉ : ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ ರಲ್ಲಿ ಪಟ್ಟಾಭಿಷಿಕ್ತರಾದರು .
4. ನಾಲ್ವಡಿ ಕೃಷ್ಣರಾಜ ಒಡೆಯರು ಯಾವುದಕ್ಕಾಗಿ ಕಂಕಣಬದ್ಧರಾದರು ?
ಉ : ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯದ ಸರ್ವೋತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾದರು
5. ವಿಶ್ವೇಶ್ವರಯ್ಯ ಅವರನ್ನು ದಿವಾನರಾಗಿ ನೇಮಿಸಿದವರು ಯಾರು ?
ಉ : ವಿಶ್ವೇಶ್ವರಯ್ಯ ಅವರನ್ನು ದಿವಾನರಾಗಿ ನೇಮಿಸಿದವರು ನಾಲ್ವಡಿ ಕೃಷ್ಣರಾಜ ಒಡೆಯರ್ ,
6. ವಿಶ್ವೇಶ್ವರಯ್ಯ ಅವರ ಹುಟ್ಟು ಹಬ್ಬದ ನೆನಪಿಗಾಗಿ ಯಾವ ದಿನಾಚರಣೆಯನ್ನು ಮಾಡಲಾಗುತ್ತಿದೆ ?
ಉ : ವಿಶ್ವೇಶ್ವರಯ್ಯ ಅವರ ಹುಟ್ಟು ಹಬ್ಬದ ನೆನಪಿಗಾಗಿ ಎಂಜಿನಿಯರ್ ದಿನಾಚರಣೆಯನ್ನು ಮಾಡಲಾಗುತ್ತಿದೆ .
ಆ ) ಕೊಟ್ಟಿರುವ ಪ್ರಶ್ನೆಗಳಿಗೆ ಮೂರು ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿ ,
1. ಶಿಕ್ಷಣದ ಬಗ್ಗೆ ವಿಶ್ವೇಶ್ವರಯ್ಯ ಅವರು ಏನೆಂದು ಹೇಳಿದ್ದಾರೆ ?
ಉ : ವಿಶ್ವೇಶ್ವರಯ್ಯ ಅವರು “ ಶಿಕ್ಷಣಕ್ಕಾಗಿ ಶಿಕ್ಷಣವಿರಬೇಕು . ಅದು ಕೆಲವೇ ಜನರ ಸೊತ್ತಾಗದೆ ಪ್ರಗತಿಪರ ರಾಜ್ಯದಲ್ಲಿ ಎಲ್ಲರ ಆಜನ್ಮಸಿದ್ಧ ಹಕ್ಕಾಗಬೇಕು ” ಎಂದು ಹೇಳಿದ್ದಾರೆ .
2. ನೆಹರೂ ಅವರು ಸರ್ ಎಂ . ವಿಶ್ವೇಶ್ವರಯ್ಯ ಅವರ ಬಗ್ಗೆ ಏನೆಂದು ಹೇಳಿದ್ದಾರೆ ?
ಉ : ನೆಹರೂ ಅವರು ಸರ್ ಎಂ . ವಿಶ್ವೇಶ್ವರಯ್ಯ ಅವರ ಬಗ್ಗೆ “ ದುರದೃಷ್ಟವಶಾತ್ ಭಾರತೀಯರಾದ ನಾವು ಹೆಚ್ಚು ಮಾತನಾಡುವವರು ಮತ್ತು ನುಡಿದಂತೆ ನಡೆಯಲಾರದವರೆಂಬ ದೂಷಣೆಗೆ ಒಳಗಾಗಿದ್ದೇವೆ . ತಾವು ಈ ಮಾತಿಗೆ ಬಹುದೊಡ್ಡ ರೀತಿಯಲ್ಲಿ ಹೊರತಾಗಿದ್ದೀರಿ . ತಾವು ಕಡಿಮೆ ಮಾತನಾಡಿದ್ದೀರಿ ; ಹೆಚ್ಚು ಕೆಲಸ ಮಾಡಿದ್ದೀರಿ . ಅದನ್ನು ನಾವು ತಮ್ಮಿಂದ ಕಲಿಯೋಣ ” ಹೇಳಿದ್ದಾರೆ .
3. ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಯಾವ ಕ್ಷೇತ್ರಗಳು ಸ್ವಯಂ ಆಡಳಿತ ಕ್ಷೇತ್ರಗಳಾದವು ?
ಉ : ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ 1. ಗ್ರಾಮ ನಿರ್ಮಲೀಕರಣ 2. ವೈದ್ಯ ಸಹಾಯ 3. ವಿದ್ಯಾ ಪ್ರಚಾರ 4. ನೀರಿನ ಸೌಕರ್ಯ 5. ಪ್ರಯಾಣ ಸೌಲಭ್ಯ ಮುಂತಾದ ಕ್ಷೇತ್ರಗಳು ಸ್ವಯಂ ಆಡಳಿತ ಕ್ಷೇತ್ರಗಳಾದವು .
4. ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಯಾವ ನೀರಾವರಿ ಯೋಜನೆಗಳು ಕಾರ್ಯರೂಪಕ್ಕೆ ಬಂದವು ?
ಉ : ೧೯೦೦ ರಲ್ಲಿಯೇ ಶಿವನಸಮುದ್ರದ ಬಳಿ ಕಾವೇರಿ ನದಿಯಿಂದ ಜಲವಿದ್ಯುತ್ ಉತ್ಪಾದನಾ ಕೇಂದ್ರ ಪ್ರಾರಂಭವಾಯಿತು . ಇದು ಭಾರತ ಮಾತ್ರವಲ್ಲ . ಏಷ್ಯಾ ಖಂಡದಲ್ಲೇ ಮೊದಲ ಜಲವಿದ್ಯುತ್ ಯೋಜನೆ . ೧೯೦೭ ರಲ್ಲಿ ವಾಣಿ ವಿಲಾಸ ಸಾಗರ ( ಮಾರಿ ಕಣಿವೆ ) ಕಟ್ಟಲ್ಪಟ್ಟಿತು . ೧೯೧೧ ರಲ್ಲಿ ಕೃಷ್ಣರಾಜ ಸಾಗರ ಇವರ ಬೃಹತ್ ಕೊಡುಗೆ .
5. ಹಣಕಾಸು ನೀತಿಯಲ್ಲಿ ವಿಶ್ವೇಶ್ವರಯ್ಯ ಅವರು ಮಾಡಿದ ಮಾರ್ಪಾಡುಗಳಾವುವು ?
ಉ : ವಿಶ್ವೇಶ್ವರಯ್ಯ ಅವರು ಕ್ರಿ.ಶ. 1913 ರಲ್ಲಿ ಮೈಸೂರು ಬ್ಯಾಂಕನ್ನು ಸ್ಥಾಪಿಸಿದರು . ಕೈಗಾರಿಕೆಗಳ ಅಭಿವೃದ್ಧಿಗೆ ಫೀಡರ್ ಬ್ಯಾಂಕ್ ಹಾಗೂ ಕೈಗಾರಿಕಾ ಹೂಡಿಕೆ ಮತ್ತು ಅಭಿವೃದ್ಧಿ ನಿಧಿಗಳು ರಚಿತಗೊಂಡವು . ಸಾರ್ವಜನಿಕ ಜೀವವಿಮಾ ಯೋಜನೆ ಜಾರಿಗೆ ತಂದರು . ರೈತರಿಗೆ ಹಾಗೂ ಕರಕುಶಲ ಕೆಲಸಗಾರರಿಗೆ ಸಾಲದ ಸೌಲಭ್ಯ ನೀಡಲು ಪ್ರಾಂತೀಯ ಸಹಕಾರಿ ಬ್ಯಾಂಕ್‌ಗಳನ್ನು ಸ್ಥಾಪಿಸಿದರು . ರಾಜ್ಯದ ಆಸ್ತಿಯನ್ನು ಹೆಚ್ಚಿಸಿ ಆದಾಯ ತರುವುದರ ಮೂಲಕ ಅಭಿವೃದ್ಧಿ ಕಾರ್ಯಗಳ ಪ್ರಭಾವವನ್ನು ಅಳೆಯಲು ಅನುಕೂಲವಾಗುವಂತೆ ಆಯವ್ಯಯದಲ್ಲಿ ಹೊಸ ದೃಷ್ಟಿಕೋನವನ್ನು ಕಂಡುಕೊಂಡರು .
ಇ ) ಕೊಟ್ಟಿರುವ ಪ್ರಶ್ನೆಗಳಿಗೆ ಎಂಟು ಹತ್ತು ವಾಕ್ಯಗಳಲ್ಲಿ ಉತ್ತರಿಸಿ .
1. ವಿಶ್ವೇಶ್ವರಯ್ಯ ಅವರು ಮೈಸೂರು ದಿವಾನರಾಗಿ ಸಲ್ಲಿಸಿದ ಸೇವೆಯನ್ನು ಕುರಿತು ಬರೆಯಿರಿ ,
ಉ : ವಿಶ್ವೇಶ್ವರಯ್ಯ ಮೈಸೂರು ಸಂಸ್ಥಾನದ ದಿವಾನರಾಗಿ ಆಡಳಿತದಲ್ಲಿ ಹೊಸ ಮಾದರಿಯನ್ನು ಅನುಷ್ಠಾನಗೊಳಿಸಿದರು , ಕಛೇರಿಯ ಕೆಲಸ ಕಾರ್ಯಗಳಲ್ಲಿ ಸಾಕಷ್ಟು ಸುಧಾರಣೆ ಮಾಡಿದರು . ಆಡಳಿತದಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಒತ್ತು ನೀಡಿದರು . ಸಂಸ್ಥಾನದಲ್ಲಿ ಸ್ಥಳೀಯ ಮಟ್ಟದಲ್ಲಿ ಕೇಂದ್ರೀಕೃತವಾಗಿದ್ದ ನ್ಯಾಯಾಂಗ ಮತ್ತು ಕಾರ್ಯಾಂಗಗಳ ಅಧಿಕಾರವನ್ನು ಪ್ರತ್ಯೇಕಗೊಳಿಸಿದರು . ರಾಜ್ಯ ಪ್ರವಾಸ ಮಾಡಿ ಅಜಮಾಯಿಷಿ ಕಾರ್ಯ ನಡೆಸಿದರು . ಸಮರ್ಥ ಕಾರ್ಯನಿರ್ವಹಣೆಗಾಗಿ ಸಮಿತಿಗಳನ್ನು ರಚಿಸಿದರು . ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿದರು . ತಾಂತ್ರಿಕ ವೃತ್ತಿಪರ ಶಿಕ್ಷಣಕ್ಕೆ ಆದ್ಯತೆ ನೀಡಿದರು . ಭಾಷೆ , ಸಾಹಿತ್ಯ ಮತ್ತು ಸಂಶೋಧನೆಗಳಿಗೆ ಪ್ರೋತ್ಸಾಹ ನೀಡಿದರು . ಮೈಸೂರು ಸಂಸ್ಥಾನದಲ್ಲಿ ಕೈಗಾರಿಕೆಗೆ ಅಗ್ರ ಪ್ರಾಶಸ್ತ್ರ ನೀಡಿದರು . ರಾಜ್ಯದ ಆರ್ಥಿಕ ಚಟುವಟಿಕೆಗಳಿಗೆ ಭದ್ರ ಬುನಾದಿ ಹಾಕುವ ಉದ್ದೇಶದಿಂದ ಹಣಕಾಸು ನೀತಿಯಲ್ಲಿ ಮಾರ್ಪಾಡು ಮಾಡಿದರು .
2. ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಮೈಸೂರು ‘ ಮಾದರಿ ಮೈಸೂರು ರಾಜ್ಯ ‘ ಹೇಗಾಯಿತು ?
ಉ : 1902 ರ ಆಗಸ್ಟ್ 8 ನೇ ತಾರೀಖಿನಿಂದ ಮೈಸೂರು ರಾಜ್ಯದ ನೇರ ಉಸ್ತುವಾರಿ ಕೃಷ್ಣರಾಜ ಒಡೆಯರ ಸುಪರ್ದಿಗೆ ಬಂದಿತು . ಆಗ ದಿವಾನರಾಗಿದ್ದ ಸರ್ . ಕೆ . ಶೇಷಾದ್ರಿ ಅಯ್ಯರ್‌ರವರ ಸಹಕಾರದೊಡನೆ ಮೈಸೂರು ರಾಜ್ಯದ ಸರ್ವೋತೋಮುಖ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರು ಕಂಕಣಬದ್ಧರಾದರು . ಇವರ ಕಾಲದಲ್ಲಿ ಇಡೀ ಭರತ ಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ಧಿಯನ್ನು ಮೈಸೂರು ರಾಜ್ಯವು ಕಂಡುದರಿಂದ , ಮೈಸೂರು ಸಂಸ್ಥಾನಕ್ಕೆ ಮಾದರಿ ಮೈಸೂರು ‘ ಎಂಬ ಕೀರ್ತಿ ಪ್ರಾಪ್ತವಾಯಿತು . ನಾಲ್ವಡಿ ಕೃಷ್ಣರಾಜ ಒಡೆಯರು ಅರಸು ಮನೆತನದಿಂದ ಬಂದವರಾಗಿದ್ದರೂ ಸಹ , ಜನತೆ ಆಡಳಿತದಲ್ಲಿ ಪಾಲ್ಗೊಳ್ಳುವಿಕೆಯ ಪರವಾಗಿದ್ದರು .
3. ಶಿಕ್ಷಣ ಕ್ಷೇತ್ರಕ್ಕೆ ವಿಶ್ವೇಶ್ವರಯ್ಯ ಅವರು ಸಲ್ಲಿಸಿದ ಕೊಡುಗೆಯನ್ನು ತಿಳಿಸಿ .
ಉ : ವಿಶ್ವೇಶ್ವರಯ್ಯ ಅವರು ಆಧುನಿಕ ಶಿಕ್ಷಣವೇ ಎಲ್ಲ ಸಮಸ್ಯೆಗಳಿಗೂ ಪರಮೋಚ್ಚ ಪರಿಹಾರವೆಂದು ನಂಬಿದ್ದರು . ಕ್ರಿ.ಶ. 1913 ರಲ್ಲಿ ಪಾಥಮಿಕ ಶಿಕ್ಷಣ ನಿಬಂಧನೆಯನ್ನು ಜಾರಿಗೆ ತಂದರು . ಮದ್ರಾಸ್ ವಿಶ್ವವಿದ್ಯಾನಿಲಯದ ನಿಯಂತಣಕ್ಕೆ ಒಳಪಟ್ಟಿದ್ದ ಪ್ರೌಢಶಿಕ್ಷಣ ಶಾಲೆಗಳನ್ನು ಬದಲಿಸಿ ಸಂಸ್ಥಾನವೇ ಪ್ರತ್ಯೇಕವಾದ ಪ್ರೌಢಶಿಕ್ಷಣದ ಅಂತಿಮ ಪರೀಕ್ಷೆ ನಡೆಸುವ ಯೋಜನೆಯನ್ನು ಆರ್ಥಿಕ ಪರಿಷತ್ತಿನ ಮೂಲಕ ಜಾರಿಗೆ ತಂದರು . ಮೈಸೂರು ವಿಶ್ವವಿದ್ಯಾನಿಲಯದ ಸಾಥಪಿಸಿದರು . “ ಶಿಕ್ಷಣಕ್ಕಾಗಿ ಶಿಕ್ಷಣವಿರಬೇಕು . ಅದು ಕೆಲವೇ ಜನರ ಸತ್ತಾಗದ ಪ್ರಗತಿಪರ ರಾಜ್ಯದಲ್ಲಿ ಎಲ್ಲರ ಆಜನ್ಮಸಿದ್ಧ ಹಕ್ಕಾಗಬೇಕು ಎಂಬುದನ್ನು ಮನಗಂಡ ಇವರು ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣಕ್ಕೆ ಆದ್ಯತೆ ನೀಡಿದರು . ಬೆಂಗಳೂರಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ಶಾಲೆ , ಮೈಸೂರಿನಲ್ಲಿ ಚಾಮರಾಜೇಂದ್ರ ತಾಂತ್ರಿಕ ಸಂಸ್ಥೆಗಳನ್ನು ಪ್ರಾರಂಭಿಸಿದರು . ಮಹಿಳಾ ಶಿಕ್ಷಣದ ಬಗ್ಗೆ ಸಹಾನುಭೂತಿ ಹೊಂದಿದ್ದ ಇವರು ಗೃಹಶಿಕ್ಷಣ ಶಾಲೆಗಳನ್ನು ಸ್ಥಾಪಿಸಿದರು . ವಿದ್ಯಾರ್ಥಿ ವೇತನವನ್ನು ಕೊಡುವ ಮೂಲಕ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುವು ಮಾಡಿಕೊಟ್ಟರು .
ಈ ) ಸಂದರ್ಭಸಹಿತ ಸ್ವಾರಸ್ಯವನ್ನು ವಿವರಿಸಿ ,
1. “ ಅವರ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿಯನ್ನು ಸೇರಿಸಿತು .
” ಉ : ಆಯ್ಕೆ : – ಈ ವಾಕ್ಯವನ್ನು ಶ್ರೀ ಡಿ.ಎಸ್ . ಜಯಪ್ಪಗೌಡ ಅವರು ರಚಿಸಿರುವ ‘ ದಿವಾನ್ ಸರ್ ಎಂ . ವಿಶ್ವೇಶ್ವರಯ್ಯನವರ ಕಾರ್ಯಸಾಧನೆಗಳು ‘ ಎಂಬ ಕೃತಿಯಿಂದ ಆಯ್ದ ‘ ಭಾಗ್ಯಶಿಲ್ಪಿಗಳು ‘ ಎಂಬ ಗದ್ಯಭಾಗದಿಂದ ಆರಿಸಿಕೊಳ್ಳಲಾಗಿದೆ . ಸಂದರ್ಭ : -ವಿಶ್ವೇಶ್ವರಯ್ಯ ಅವರು ಪೂನಾದ ಮುಥಾ ಕಾಲುವೆಗೆ ನೀರಿನ ನೆಲೆಯಾಗಿದ್ದ ಪೀಪ್ ಜಲಾಶಯಕ್ಕೆ ಸ್ವತಃ ತಾವೇ ಅನ್ವೇಷಣೆ ಮಾಡಿದ ಸ್ವಯಂಚಾಲಿತ ಬಾಗಿಲುಗಳನ್ನು ಯಶಸ್ವಿಯಾಗಿ ಅಳವಡಿಸಿದರು ಎಂದು ಹೇಳುವ ಸಂದರ್ಭದಲ್ಲಿ ಲೇಖಕರು ಈ ಮಾತನ್ನು ಹೇಳುತ್ತಾರೆ .
ಸ್ವಾರಸ್ಯ : – ವಿಶ್ವೇಶ್ವರಯ್ಯ ಅವರಲ್ಲಿದ್ದ ಬುದ್ಧಿಶಕ್ತಿ ಹಾಗೂ ಅನ್ವೇಷಣಾ ಸಾಮರ್ಥ್ಯವನ್ನು ಈ ಮಾತಿನ ಮೂಲಕ ಸ್ವಾರಸ್ಯಪೂರ್ಣವಾಗಿ ಅಭಿವ್ಯಕ್ತಪಡಿಸಲಾಗಿದೆ .
2. “ ಮೈಸೂರು ಸಂಸ್ಥಾನಕ್ಕೆ ಮಾದರಿ ಮೈಸೂರು ‘ ಎಂಬ ಕೀರ್ತಿ ಪ್ರಾಪ್ತವಾಯಿತು . ”
ಉ : ಆಯ್ಕೆ : – ಈ ವಾಕ್ಯವನ್ನು ‘ ಭಾಗ್ಯಶಿಲ್ಪಿಗಳು ‘ ಗದ್ಯದಲ್ಲಿರುವ ಪಠ್ಯಪುಸ್ತಕ ಸಮಿತಿಯು ಸಂಗ್ರಹಿಸಿ ನೀಡಿರುವ ನಾಲ್ವಡಿ ಕೃಷ್ಣರಾಜ ಒಡೆಯರು ” ಭಾಗದಿಂದ ಆರಿಸಿಕೊಳ್ಳಲಾಗಿದೆ . ಸಂದರ್ಭ : – ಮೈಸೂರು ಸಂಸ್ಥಾನದ ಆಳ್ವಿಕೆ ನಾಲ್ವಡಿ ಕೃಷ್ಣರಾಜ ಒಡೆಯರ ಸುಪರ್ದಿಗೆ ಬಂದಿತು . ಆಗ ದಿವಾನರಾಗಿದ್ದ ಕೆ ಶೇಷಾದ್ರಿ ಅಯ್ಯರ್ ಅವರ ಸಹಕಾರದೊಂದಿಗೆ ನಾಲ್ವಡಿಯವರು ಮೈಸೂರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾಗಿ ಆಡಳಿತ , ಶಿಕ್ಷಣ , ಆರ್ಥಿಕ , ಸಾಮಾಜಿಕ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಬದಲಾವಣೆಗಳನ್ನು ತಂದರು .ಇದರಿಂದ ಇವರ ಕಾಲದಲ್ಲಿ ಮೈಸೂರು ಸಂಸ್ಥಾನವು ಯಾವ ಸ ೦ ಸ್ಥಾನವು ಕಾಣದ ಅಭಿವೃದ್ಧಿಸಾಧಿಸಿತು ಎಂದು ಹೇಳುವ ಸಂದರ್ಭದಲ್ಲಿ ಈ ಮಾತು ಬಂದಿದೆ .
ಸ್ವಾರಸ್ಯ : ನಾಲ್ವಡಿ ಕೃಷ್ಣರಾಜ ಒಡೆಯರ ದೂರದೃಷ್ಟಿ , ಅವರ ಅಭಿವೃದ್ಧಿಶೀಲ ಆಡಳಿತ ಎಂಬುದು ಈ ಮಾತಿಂದ ನಮಗೆ ತಿಳಿಯುತ್ತದೆ .
3. “ ಸಾಮಾಜಿಕ ಕಾನೂನುಗಳ ಹರಿಕಾರ . “
ಉ : ಆಯ್ಕೆ : – ಈ ವಾಕ್ಯವನ್ನು ‘ ಭಾಗ್ಯಶಿಲ್ಪಿಗಳು ‘ ಗದ್ಯದಲ್ಲಿರುವ ಪಠ್ಯಪುಸ್ತಕ ಸಮಿತಿಯು ಸಂಗ್ರಹಿಸಿ ನೀಡಿರುವ ನಾಲ್ವಡಿ ಕೃಷ್ಣರಾಜ ಒಡೆಯರು ” ಭಾಗದಿಂದ ಆರಿಸಿಕೊಳ್ಳಲಾಗಿದೆ . ಸಂದರ್ಭ : – ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆಗಳನ್ನು ವಿವರಿಸುವ ಸಂದರ್ಭದಲ್ಲಿ ಲೇಖಕರು ಈ ಮಾತನ್ನು ಹೇಳಿದ್ದಾರೆ . ನಾಲ್ವಡಿ ಕೃಷ್ಣರಾಜ ಒಡೆಯರು ಸ್ಥಳೀಯ ಸಂಸ್ಥೆಗಳನ್ನು ರಚಿಸಿ ಆಡಳಿತ ವಿಕೇಂದ್ರೀಕರಣ ಮಾಡಿದರು . ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವನ್ನಾಗಿ ರೂಪಿಸಿದರು . ‘ ಸಾಮಾಜಿಕ ಕಾನೂನುಗಳ ಹರಿಕಾರ ‘ ಎಂದು ಹೆಸರಾದರು , ಸಾಹಿತ್ಯ , ಸಂಗೀತ , ವಾಸ್ತುಶಿಲ್ಪಗಳ ಅಭಿವೃದ್ಧಿಗೆ ಒತ್ತು ನೀಡಿದರು .
ಸ್ವಾರಸ್ಯ : – ಸ್ವತಃ ರಾಜರಾಗಿ ಕೇಂದ್ರೀಕೃತ ವ್ಯವಸ್ಥೆಗೆ ಬದಲಾಗಿ ಆಡಳಿತದಲ್ಲಿ ವಿಕೇಂದ್ರೀಕೃತ ವ್ಯವಸ್ಥೆ ತಂದು ಸಾಮಾಜಿಕ ಕಾನೂನುಗಳನ್ನು ಜಾರಿಗೊಳಿಸಿದ ಒಡೆಯರಿಗೆ ಈ ಬಿರುದು ನೀಡಿರುವುದು ಒಪ್ಪುವಂತಾದ್ದಾಗಿದೆ .
4. “ ತಾವು ಕಡಿಮೆ ಮಾತನಾಡಿದ್ದೀರಿ ; ಹೆಚ್ಚು ಕೆಲಸ ಮಾಡಿದ್ದೀರಿ . ”
ಆಯ್ಕೆ : – ಈ ವಾಕ್ಯವನ್ನು ಶ್ರೀ ಡಿ.ಎಸ್ . ಜಯಪ್ಪಗೌಡ ಅವರು ರಚಿಸಿರುವ ‘ ದಿವಾನ್ ಸರ್ ಎಂ . ವಿಶ್ವೇಶ್ವರಯ್ಯನವರ ಕಾರ್ಯಸಾಧನೆಗಳು ಎಂಬ ಕೃತಿಯಿಂದ ಆಯ್ದ ‘ ಭಾಗ್ಯಶಿಲ್ಪಿಗಳು ‘ ಎಂಬ ಗದ್ಯಭಾಗದಿಂದ ಆರಿಸಿಕೊಳ್ಳಲಾಗಿದೆ . ಸಂದರ್ಭ : – ಸರ್.ಎಂ. ವೀಶ್ವೇಶ್ವರಯ್ಯ ಅವರ ಜನ್ಮ ಶತಮಾನೋತ್ಸವ ಸಮಾರಂಭ ಬೆಂಗಳೂರಿನಲ್ಲಿ ಜರುಗಿತು . ಆಗ ಅಂದಿನ ಪ್ರಧಾನಿಗಳಾಗಿದ್ದ ಜವಹರಲಾಲ್ ನೆಹರೂ ಅವರು ಸರ್.ಎಂ.ವಿ. ಅವರ ಬಗ್ಗೆ ಮಾತನಾಡುತ್ತಾ ಈ ಮಾತನ್ನು ಹೇಳಿದರು . “ ದುರದೃಷ್ಟವಶಾತ್ ಭಾರತೀಯರಾದ ನಾವು ಹೆಚ್ಚು ಮಾತನಾಡುವವರು ಮತ್ತು ನುಡಿದಂತೆ ನಡೆಯಲಾರದವರೆಂಬ ದೂಷಣೆಗೆ ಒಳಗಾಗಿದ್ದೇವೆ . ತಾವು ಈ ಮಾತಿಗೆ ಬಹುದೊಡ್ಡ ರೀತಿಯಲ್ಲಿ ಹೊರತಾಗಿದ್ದೀರಿ , ತಾವು ಕಡಿಮೆ ಮಾತನಾಡಿದ್ದೀರಿ ; ಹೆಚ್ಚು ಕೆಲಸ ಮಾಡಿದ್ದೀರಿ . ಅದನ್ನು ನಾವು ತಮ್ಮಿಂದ ಕಲಿಯೋಣ ” ಎಂದು ಆ ಸಂದರ್ಭದಲ್ಲಿ ಹೊಗಳಿದರು .
ಸ್ವಾರಸ್ಯ : – ಈ ಮಾತುಗಳಲ್ಲಿ ಸರ್.ಎಂ.ವಿ. ಅವರು ಸಲ್ಲಿಸಿದ ಅಘಾದ ಸೇವೆ ಇಡೀ ಭಾರತದಾದ್ಯಂತ ಎಲ್ಲ ಮನ ಸೆಳೆದಿತ್ತು ಎಂಬುದರ ಜೊತೆಗೆ ಅವರ ಕರ್ತವ್ಯ ನಿಷ್ಠೆ ಎಲ್ಲರಿಗೂ ಮಾದರಿಯಾಗಿತ್ತು ಎಂಬುದನ್ನು ತಿಳಿಯಬಹುದಾಗಿದೆ .
ಉ ) ಬಿಟ್ಟ ಸ್ಥಳವನ್ನು ಸರಿಯಾದ ಪದದಿಂದ ತುಂಬಿರಿ ,
1. ನಾಲ್ವಡಿ ಕೃಷ್ಣರಾಜ ಒಡೆಯರ್‌ರವರಿಗೆ ರೀಜೆಂಟರಾಗಿ ಕಾರ್ಯನಿರ್ವಹಿಸಿದವರು ಮಹಾರಾಣಿ ವಾಣಿವಿಲಾಸರವರು .
2. ೧೯೧೪ ರಲ್ಲಿ ಶಾಲಾ ಪ್ರವೇಶಕ್ಕೆ ಜಾತಿ ಪರಿಗಣನೆಯ ನಿಷೇಧವಾಯಿತು .
3. ವಿಶ್ವೇಶ್ವರಯ್ಯ ಅವರು ಮುಂಬೈ ಪ್ರಾಂತ್ಯದಲ್ಲಿ ಸಹಾಯಕ ಎಂಜಿನಿಯರ್ ಆಗಿ ಸೇವೆ ಪ್ರಾರಂಭಿಸಿದರು .
4. ಮುಂಬೈ ಪ್ರಾಂತ್ಯದ ಗವರ್ನರ್ ಆಗಿದ್ದ ಲಾರ್ಡ್ ಸಂಡ್ ಹರ್ಸ್ಟ್ ಅವರು ವಿಶ್ವೇಶ್ವರಯ್ಯ ಅವರನ್ನು ಮುಕ್ತಕಂಠದಿಂದ ಹಾಡಿ ಹೊಗಳಿದರು .
5. ಭಾರತ ಸರಕಾರವು ವಿಶ್ವೇಶ್ವರಯ್ಯನವರಿಗೆ ಭಾರತ ರತ್ನ ಎಂಬ ಪ್ರಶಸ್ತಿ ನೀಡಿ ಗೌರವಿಸಿತು .
ಭಾಷಾ ಚಟುವಟಿಕೆ
1 ) ಕೊಟ್ಟಿರುವ ಪದಗಳ ತತ್ಸಮ ತದ್ಭದ ಬರೆಯಿರಿ ,
ವಂಶ – ಬಂಚ , ಸ್ಥಾನ –– ತಾನ ( ತಾಣ ) , ಯಶ – ಜಸ , ಪಟ್ಟಣ – ಪತ್ತನ , ಕಾರ್ಯ- ಕಜ್ಜ
2 ) ನೀಡಿರುವ ಪದಗಳಲ್ಲಿ ಅನ್ಯದೇಶ್ಯ ಪದಗಳನ್ನು ಆರಿಸಿ ಬರೆಯಿರಿ .
ಅನ್ಯದೇಶ್ಯ ಪದಗಳು : ಡಿಪ್ಲೊಮಾ , ಅಜಮಾಯಿಷಿ , ದಿವಾನ , ಸೋಪು , ಕಾರ್ಖಾನೆ , ಕಾಗದ , ಕಚೇರಿ
ಇತರ ವಿಷಯಗಳು:
Helpfull
👌