10 ನೇ ತರಗತಿ ಕನ್ನಡ ಭಾಗ್ಯಶಿಲ್ಪಿಗಳು ನೋಟ್ಸ್‌ | 10th Standard Kannada Bhagya Shilpigalu Notes

Bhagya Shilpigalu Notes ,Question Answer Pdf Download 2023, 10ನೇ ತರಗತಿ ಕನ್ನಡ ಭಾಗ್ಯಶಿಲ್ಪಿಗಳು ನೋಟ್ಸ್‌ 10th standard Kannada bhagya shilpi question answer

ತರಗತಿ : 10ನೇ ತರಗತಿ

ಪಾಠದ ಹೆಸರು : ಭಾಗ್ಯಶಿಲ್ಪಿಗಳು

ಕೃತಿಕಾರರ ಹೆಸರು : ಡಿ.ಎಸ್‌.ಜಯಪ್ಪಗೌಡ

Table of Contents

10th bhagya shilpigalu kannada question and answer

10 ನೇ ತರಗತಿ ಕನ್ನಡ ಭಾಗ್ಯಶಿಲ್ಪಿಗಳು ನೋಟ್ಸ್‌  10th Standard Kannada Bhagyashilpigalu  Notes
10th kannada bhagya shilpi question answer

ಲೇಖಕರ ಪರಿಚಯ :

ಡಿ.ಎಸ್‌.ಜಯಪ್ಪಗೌಡ

ಡಿ . ಎಸ್‌ . ಜಯಪ್ಪಗೌಡ ( ೧೯೪೭ ) ಇವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯವರು . ದಾರದಹಳ್ಳಿ ಸುಬ್ಬೇಗೌಡ ಜಯಪ್ಪಗೌಡ ಎಂಬುದು ಇವರ ಪೂರ್ಣಹೆಸರು . ಕರ್ನಾಟಕ ಗ್ರಾಮೀಣ ಸಂಸ್ಥೆಗಳು , ಕರ್ನಾಟಕದ ಕಡಲಾಚೆಯ ಸಂಪರ್ಕಗಳು , ಮೈಸೂರು ಒಡೆಯರು . ಜನಪದ ಆಟಗಳು , ದಿವಾನ್ ಸರ್ ಎಂ . ವಿಶ್ವೇಶ್ವರಯ್ಯನವರ ಕಾರ್ಯಸಾಧನೆಗಳು ಶ್ರೀಯುತರ ಪ್ರಮುಖ ಕೃತಿಗಳು , ಕರ್ನಾಟಕದ ಕಡಲಾಚೆಯ ಸಂಪರ್ಕಗಳು ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ . ಧಾರವಾಡ ಕರ್ನಾಟಕ ಸಂಘದ ಸಂಶೋಧನಾ ಬಹುಮಾನಕ್ಕೆ ಭಾಜನರಾಗಿದ್ದಾರೆ .

Bhagya Shilpigalu Notes Question Answer

ಅ ) ಕೊಟ್ಟಿರುವ ಪ್ರಶ್ನೆಗಳಿಗೆ ಒಂದೊಂದು ವಾಕ್ಯದಲ್ಲಿ ಉತ್ತರಿಸಿ .

1. ಏಷ್ಯಾ ಖಂಡದಲ್ಲಿಯೇ ಮೊದಲು ಪ್ರಾರಂಭಿಸಿದ ಜಲ ವಿದ್ಯುತ್ ಯೋಜನೆ ಯಾವುದು ?

ಉ : ಶಿವನಸಮುದ್ರದ ಬಳಿ ಕಾವೇರಿ ನದಿಯ ಜಲವಿದ್ಯುತ್ ಯೋಜನೆ ವಿಷ್ಯಾ ಖಂಡದಲ್ಲಿಯೇ ಮೊದಲು ಪ್ರಾರಂಭಿಸಿದ ಜಲ ವಿದ್ಯುತ್‌ ಯೋಜನೆಯಾಗಿದೆ .

2. ಬ್ರಿಟಿಷ್ ಸರ್ಕಾರ ವಿಶ್ವೇಶ್ವರಯ್ಯ ಅವರಿಗೆ ಯಾವ ಪದವಿಯನ್ನು ನೀಡಿ ಗೌರವಿಸಿತು ?

ಉ : ಬ್ರಿಟಿಷ್ ಸರ್ಕಾರ ವಿಶ್ವೇಶ್ವರಯ್ಯ ಅವರಿಗೆ ಸರ್ ಪದವಿಯನ್ನು ನೀಡಿ ಗೌರವಿಸಿತು .

3. ನಾಲ್ವಡಿ ಕೃಷ್ಣರಾಜ ಒಡೆಯರು ಯಾವಾಗ ಪಟ್ಟಾಭಿಷಿಕ್ತರಾದರು ?

ಉ : ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ ರಲ್ಲಿ ಪಟ್ಟಾಭಿಷಿಕ್ತರಾದರು .

4. ನಾಲ್ವಡಿ ಕೃಷ್ಣರಾಜ ಒಡೆಯರು ಯಾವುದಕ್ಕಾಗಿ ಕಂಕಣಬದ್ಧರಾದರು ?

ಉ : ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯದ ಸರ್ವೋತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾದರು

5. ವಿಶ್ವೇಶ್ವರಯ್ಯ ಅವರನ್ನು ದಿವಾನರಾಗಿ ನೇಮಿಸಿದವರು ಯಾರು ?

ಉ : ವಿಶ್ವೇಶ್ವರಯ್ಯ ಅವರನ್ನು ದಿವಾನರಾಗಿ ನೇಮಿಸಿದವರು ನಾಲ್ವಡಿ ಕೃಷ್ಣರಾಜ ಒಡೆಯರ್ ,

6. ವಿಶ್ವೇಶ್ವರಯ್ಯ ಅವರ ಹುಟ್ಟು ಹಬ್ಬದ ನೆನಪಿಗಾಗಿ ಯಾವ ದಿನಾಚರಣೆಯನ್ನು ಮಾಡಲಾಗುತ್ತಿದೆ ?

ಉ : ವಿಶ್ವೇಶ್ವರಯ್ಯ ಅವರ ಹುಟ್ಟು ಹಬ್ಬದ ನೆನಪಿಗಾಗಿ ಎಂಜಿನಿಯರ್ ದಿನಾಚರಣೆಯನ್ನು ಮಾಡಲಾಗುತ್ತಿದೆ .

1. ಏಷ್ಯಾ ಖಂಡದಲ್ಲಿಯೇ ಮೊದಲು ಪ್ರಾರಂಭಿಸಿದ ಜಲ ವಿದ್ಯುತ್ ಯೋಜನೆ ಯಾವುದು ?

ಉ : ಶಿವನಸಮುದ್ರದ ಬಳಿ ಕಾವೇರಿ ನದಿಯ ಜಲವಿದ್ಯುತ್ ಯೋಜನೆ ವಿಷ್ಯಾ ಖಂಡದಲ್ಲಿಯೇ ಮೊದಲು ಪ್ರಾರಂಭಿಸಿದ ಜಲ ವಿದ್ಯುತ್‌ ಯೋಜನೆಯಾಗಿದೆ .

2. ಬ್ರಿಟಿಷ್ ಸರ್ಕಾರ ವಿಶ್ವೇಶ್ವರಯ್ಯ ಅವರಿಗೆ ಯಾವ ಪದವಿಯನ್ನು ನೀಡಿ ಗೌರವಿಸಿತು ?

ಉ : ಬ್ರಿಟಿಷ್ ಸರ್ಕಾರ ವಿಶ್ವೇಶ್ವರಯ್ಯ ಅವರಿಗೆ ಸರ್ ಪದವಿಯನ್ನು ನೀಡಿ ಗೌರವಿಸಿತು .

3. ನಾಲ್ವಡಿ ಕೃಷ್ಣರಾಜ ಒಡೆಯರು ಯಾವಾಗ ಪಟ್ಟಾಭಿಷಿಕ್ತರಾದರು ?

ಉ : ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ ರಲ್ಲಿ ಪಟ್ಟಾಭಿಷಿಕ್ತರಾದರು .

4. ನಾಲ್ವಡಿ ಕೃಷ್ಣರಾಜ ಒಡೆಯರು ಯಾವುದಕ್ಕಾಗಿ ಕಂಕಣಬದ್ಧರಾದರು ?

ಉ : ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯದ ಸರ್ವೋತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾದರು

5. ವಿಶ್ವೇಶ್ವರಯ್ಯ ಅವರನ್ನು ದಿವಾನರಾಗಿ ನೇಮಿಸಿದವರು ಯಾರು ?

ಉ : ವಿಶ್ವೇಶ್ವರಯ್ಯ ಅವರನ್ನು ದಿವಾನರಾಗಿ ನೇಮಿಸಿದವರು ನಾಲ್ವಡಿ ಕೃಷ್ಣರಾಜ ಒಡೆಯರ್ ,

6. ವಿಶ್ವೇಶ್ವರಯ್ಯ ಅವರ ಹುಟ್ಟು ಹಬ್ಬದ ನೆನಪಿಗಾಗಿ ಯಾವ ದಿನಾಚರಣೆಯನ್ನು ಮಾಡಲಾಗುತ್ತಿದೆ ?

ಉ : ವಿಶ್ವೇಶ್ವರಯ್ಯ ಅವರ ಹುಟ್ಟು ಹಬ್ಬದ ನೆನಪಿಗಾಗಿ ಎಂಜಿನಿಯರ್ ದಿನಾಚರಣೆಯನ್ನು ಮಾಡಲಾಗುತ್ತಿದೆ .

ಆ ) ಕೊಟ್ಟಿರುವ ಪ್ರಶ್ನೆಗಳಿಗೆ ಮೂರು ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿ ,

1. ಶಿಕ್ಷಣದ ಬಗ್ಗೆ ವಿಶ್ವೇಶ್ವರಯ್ಯ ಅವರು ಏನೆಂದು ಹೇಳಿದ್ದಾರೆ ?

ಉ : ವಿಶ್ವೇಶ್ವರಯ್ಯ ಅವರು “ ಶಿಕ್ಷಣಕ್ಕಾಗಿ ಶಿಕ್ಷಣವಿರಬೇಕು . ಅದು ಕೆಲವೇ ಜನರ ಸೊತ್ತಾಗದೆ ಪ್ರಗತಿಪರ ರಾಜ್ಯದಲ್ಲಿ ಎಲ್ಲರ ಆಜನ್ಮಸಿದ್ಧ ಹಕ್ಕಾಗಬೇಕು ” ಎಂದು ಹೇಳಿದ್ದಾರೆ .

2. ನೆಹರೂ ಅವರು ಸರ್ ಎಂ . ವಿಶ್ವೇಶ್ವರಯ್ಯ ಅವರ ಬಗ್ಗೆ ಏನೆಂದು ಹೇಳಿದ್ದಾರೆ ?

ಉ : ನೆಹರೂ ಅವರು ಸರ್ ಎಂ . ವಿಶ್ವೇಶ್ವರಯ್ಯ ಅವರ ಬಗ್ಗೆ “ ದುರದೃಷ್ಟವಶಾತ್ ಭಾರತೀಯರಾದ ನಾವು ಹೆಚ್ಚು ಮಾತನಾಡುವವರು ಮತ್ತು ನುಡಿದಂತೆ ನಡೆಯಲಾರದವರೆಂಬ ದೂಷಣೆಗೆ ಒಳಗಾಗಿದ್ದೇವೆ . ತಾವು ಈ ಮಾತಿಗೆ ಬಹುದೊಡ್ಡ ರೀತಿಯಲ್ಲಿ ಹೊರತಾಗಿದ್ದೀರಿ . ತಾವು ಕಡಿಮೆ ಮಾತನಾಡಿದ್ದೀರಿ ; ಹೆಚ್ಚು ಕೆಲಸ ಮಾಡಿದ್ದೀರಿ . ಅದನ್ನು ನಾವು ತಮ್ಮಿಂದ ಕಲಿಯೋಣ ” ಹೇಳಿದ್ದಾರೆ .

3. ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಯಾವ ಕ್ಷೇತ್ರಗಳು ಸ್ವಯಂ ಆಡಳಿತ ಕ್ಷೇತ್ರಗಳಾದವು ?

ಉ : ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ 1. ಗ್ರಾಮ ನಿರ್ಮಲೀಕರಣ 2. ವೈದ್ಯ ಸಹಾಯ 3. ವಿದ್ಯಾ ಪ್ರಚಾರ 4. ನೀರಿನ ಸೌಕರ್ಯ 5. ಪ್ರಯಾಣ ಸೌಲಭ್ಯ ಮುಂತಾದ ಕ್ಷೇತ್ರಗಳು ಸ್ವಯಂ ಆಡಳಿತ ಕ್ಷೇತ್ರಗಳಾದವು .

4. ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಯಾವ ನೀರಾವರಿ ಯೋಜನೆಗಳು ಕಾರ್ಯರೂಪಕ್ಕೆ ಬಂದವು ?

ಉ : ೧೯೦೦ ರಲ್ಲಿಯೇ ಶಿವನಸಮುದ್ರದ ಬಳಿ ಕಾವೇರಿ ನದಿಯಿಂದ ಜಲವಿದ್ಯುತ್ ಉತ್ಪಾದನಾ ಕೇಂದ್ರ ಪ್ರಾರಂಭವಾಯಿತು . ಇದು ಭಾರತ ಮಾತ್ರವಲ್ಲ . ಏಷ್ಯಾ ಖಂಡದಲ್ಲೇ ಮೊದಲ ಜಲವಿದ್ಯುತ್ ಯೋಜನೆ . ೧೯೦೭ ರಲ್ಲಿ ವಾಣಿ ವಿಲಾಸ ಸಾಗರ ( ಮಾರಿ ಕಣಿವೆ ) ಕಟ್ಟಲ್ಪಟ್ಟಿತು . ೧೯೧೧ ರಲ್ಲಿ ಕೃಷ್ಣರಾಜ ಸಾಗರ ಇವರ ಬೃಹತ್ ಕೊಡುಗೆ .

5. ಹಣಕಾಸು ನೀತಿಯಲ್ಲಿ ವಿಶ್ವೇಶ್ವರಯ್ಯ ಅವರು ಮಾಡಿದ ಮಾರ್ಪಾಡುಗಳಾವುವು ?

ಉ : ವಿಶ್ವೇಶ್ವರಯ್ಯ ಅವರು ಕ್ರಿ.ಶ. 1913 ರಲ್ಲಿ ಮೈಸೂರು ಬ್ಯಾಂಕನ್ನು ಸ್ಥಾಪಿಸಿದರು . ಕೈಗಾರಿಕೆಗಳ ಅಭಿವೃದ್ಧಿಗೆ ಫೀಡರ್ ಬ್ಯಾಂಕ್ ಹಾಗೂ ಕೈಗಾರಿಕಾ ಹೂಡಿಕೆ ಮತ್ತು ಅಭಿವೃದ್ಧಿ ನಿಧಿಗಳು ರಚಿತಗೊಂಡವು . ಸಾರ್ವಜನಿಕ ಜೀವವಿಮಾ ಯೋಜನೆ ಜಾರಿಗೆ ತಂದರು . ರೈತರಿಗೆ ಹಾಗೂ ಕರಕುಶಲ ಕೆಲಸಗಾರರಿಗೆ ಸಾಲದ ಸೌಲಭ್ಯ ನೀಡಲು ಪ್ರಾಂತೀಯ ಸಹಕಾರಿ ಬ್ಯಾಂಕ್‌ಗಳನ್ನು ಸ್ಥಾಪಿಸಿದರು . ರಾಜ್ಯದ ಆಸ್ತಿಯನ್ನು ಹೆಚ್ಚಿಸಿ ಆದಾಯ ತರುವುದರ ಮೂಲಕ ಅಭಿವೃದ್ಧಿ ಕಾರ್ಯಗಳ ಪ್ರಭಾವವನ್ನು ಅಳೆಯಲು ಅನುಕೂಲವಾಗುವಂತೆ ಆಯವ್ಯಯದಲ್ಲಿ ಹೊಸ ದೃಷ್ಟಿಕೋನವನ್ನು ಕಂಡುಕೊಂಡರು .

ಇ ) ಕೊಟ್ಟಿರುವ ಪ್ರಶ್ನೆಗಳಿಗೆ ಎಂಟು ಹತ್ತು ವಾಕ್ಯಗಳಲ್ಲಿ ಉತ್ತರಿಸಿ .

1. ವಿಶ್ವೇಶ್ವರಯ್ಯ ಅವರು ಮೈಸೂರು ದಿವಾನರಾಗಿ ಸಲ್ಲಿಸಿದ ಸೇವೆಯನ್ನು ಕುರಿತು ಬರೆಯಿರಿ ,

ಉ : ವಿಶ್ವೇಶ್ವರಯ್ಯ ಮೈಸೂರು ಸಂಸ್ಥಾನದ ದಿವಾನರಾಗಿ ಆಡಳಿತದಲ್ಲಿ ಹೊಸ ಮಾದರಿಯನ್ನು ಅನುಷ್ಠಾನಗೊಳಿಸಿದರು , ಕಛೇರಿಯ ಕೆಲಸ ಕಾರ್ಯಗಳಲ್ಲಿ ಸಾಕಷ್ಟು ಸುಧಾರಣೆ ಮಾಡಿದರು . ಆಡಳಿತದಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಒತ್ತು ನೀಡಿದರು . ಸಂಸ್ಥಾನದಲ್ಲಿ ಸ್ಥಳೀಯ ಮಟ್ಟದಲ್ಲಿ ಕೇಂದ್ರೀಕೃತವಾಗಿದ್ದ ನ್ಯಾಯಾಂಗ ಮತ್ತು ಕಾರ್ಯಾಂಗಗಳ ಅಧಿಕಾರವನ್ನು ಪ್ರತ್ಯೇಕಗೊಳಿಸಿದರು . ರಾಜ್ಯ ಪ್ರವಾಸ ಮಾಡಿ ಅಜಮಾಯಿಷಿ ಕಾರ್ಯ ನಡೆಸಿದರು . ಸಮರ್ಥ ಕಾರ್ಯನಿರ್ವಹಣೆಗಾಗಿ ಸಮಿತಿಗಳನ್ನು ರಚಿಸಿದರು . ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿದರು . ತಾಂತ್ರಿಕ ವೃತ್ತಿಪರ ಶಿಕ್ಷಣಕ್ಕೆ ಆದ್ಯತೆ ನೀಡಿದರು . ಭಾಷೆ , ಸಾಹಿತ್ಯ ಮತ್ತು ಸಂಶೋಧನೆಗಳಿಗೆ ಪ್ರೋತ್ಸಾಹ ನೀಡಿದರು . ಮೈಸೂರು ಸಂಸ್ಥಾನದಲ್ಲಿ ಕೈಗಾರಿಕೆಗೆ ಅಗ್ರ ಪ್ರಾಶಸ್ತ್ರ ನೀಡಿದರು . ರಾಜ್ಯದ ಆರ್ಥಿಕ ಚಟುವಟಿಕೆಗಳಿಗೆ ಭದ್ರ ಬುನಾದಿ ಹಾಕುವ ಉದ್ದೇಶದಿಂದ ಹಣಕಾಸು ನೀತಿಯಲ್ಲಿ ಮಾರ್ಪಾಡು ಮಾಡಿದರು .

2. ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಮೈಸೂರು ‘ ಮಾದರಿ ಮೈಸೂರು ರಾಜ್ಯ ‘ ಹೇಗಾಯಿತು ?

ಉ : 1902 ರ ಆಗಸ್ಟ್ 8 ನೇ ತಾರೀಖಿನಿಂದ ಮೈಸೂರು ರಾಜ್ಯದ ನೇರ ಉಸ್ತುವಾರಿ ಕೃಷ್ಣರಾಜ ಒಡೆಯರ ಸುಪರ್ದಿಗೆ ಬಂದಿತು . ಆಗ ದಿವಾನರಾಗಿದ್ದ ಸರ್ . ಕೆ . ಶೇಷಾದ್ರಿ ಅಯ್ಯರ್‌ರವರ ಸಹಕಾರದೊಡನೆ ಮೈಸೂರು ರಾಜ್ಯದ ಸರ್ವೋತೋಮುಖ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರು ಕಂಕಣಬದ್ಧರಾದರು . ಇವರ ಕಾಲದಲ್ಲಿ ಇಡೀ ಭರತ ಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ಧಿಯನ್ನು ಮೈಸೂರು ರಾಜ್ಯವು ಕಂಡುದರಿಂದ , ಮೈಸೂರು ಸಂಸ್ಥಾನಕ್ಕೆ ಮಾದರಿ ಮೈಸೂರು ‘ ಎಂಬ ಕೀರ್ತಿ ಪ್ರಾಪ್ತವಾಯಿತು . ನಾಲ್ವಡಿ ಕೃಷ್ಣರಾಜ ಒಡೆಯರು ಅರಸು ಮನೆತನದಿಂದ ಬಂದವರಾಗಿದ್ದರೂ ಸಹ , ಜನತೆ ಆಡಳಿತದಲ್ಲಿ ಪಾಲ್ಗೊಳ್ಳುವಿಕೆಯ ಪರವಾಗಿದ್ದರು .

3. ಶಿಕ್ಷಣ ಕ್ಷೇತ್ರಕ್ಕೆ ವಿಶ್ವೇಶ್ವರಯ್ಯ ಅವರು ಸಲ್ಲಿಸಿದ ಕೊಡುಗೆಯನ್ನು ತಿಳಿಸಿ .

ಉ : ವಿಶ್ವೇಶ್ವರಯ್ಯ ಅವರು ಆಧುನಿಕ ಶಿಕ್ಷಣವೇ ಎಲ್ಲ ಸಮಸ್ಯೆಗಳಿಗೂ ಪರಮೋಚ್ಚ ಪರಿಹಾರವೆಂದು ನಂಬಿದ್ದರು . ಕ್ರಿ.ಶ. 1913 ರಲ್ಲಿ ಪಾಥಮಿಕ ಶಿಕ್ಷಣ ನಿಬಂಧನೆಯನ್ನು ಜಾರಿಗೆ ತಂದರು . ಮದ್ರಾಸ್ ವಿಶ್ವವಿದ್ಯಾನಿಲಯದ ನಿಯಂತಣಕ್ಕೆ ಒಳಪಟ್ಟಿದ್ದ ಪ್ರೌಢಶಿಕ್ಷಣ ಶಾಲೆಗಳನ್ನು ಬದಲಿಸಿ ಸಂಸ್ಥಾನವೇ ಪ್ರತ್ಯೇಕವಾದ ಪ್ರೌಢಶಿಕ್ಷಣದ ಅಂತಿಮ ಪರೀಕ್ಷೆ ನಡೆಸುವ ಯೋಜನೆಯನ್ನು ಆರ್ಥಿಕ ಪರಿಷತ್ತಿನ ಮೂಲಕ ಜಾರಿಗೆ ತಂದರು . ಮೈಸೂರು ವಿಶ್ವವಿದ್ಯಾನಿಲಯದ ಸಾಥಪಿಸಿದರು . “ ಶಿಕ್ಷಣಕ್ಕಾಗಿ ಶಿಕ್ಷಣವಿರಬೇಕು . ಅದು ಕೆಲವೇ ಜನರ ಸತ್ತಾಗದ ಪ್ರಗತಿಪರ ರಾಜ್ಯದಲ್ಲಿ ಎಲ್ಲರ ಆಜನ್ಮಸಿದ್ಧ ಹಕ್ಕಾಗಬೇಕು ಎಂಬುದನ್ನು ಮನಗಂಡ ಇವರು ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣಕ್ಕೆ ಆದ್ಯತೆ ನೀಡಿದರು . ಬೆಂಗಳೂರಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ಶಾಲೆ , ಮೈಸೂರಿನಲ್ಲಿ ಚಾಮರಾಜೇಂದ್ರ ತಾಂತ್ರಿಕ ಸಂಸ್ಥೆಗಳನ್ನು ಪ್ರಾರಂಭಿಸಿದರು . ಮಹಿಳಾ ಶಿಕ್ಷಣದ ಬಗ್ಗೆ ಸಹಾನುಭೂತಿ ಹೊಂದಿದ್ದ ಇವರು ಗೃಹಶಿಕ್ಷಣ ಶಾಲೆಗಳನ್ನು ಸ್ಥಾಪಿಸಿದರು . ವಿದ್ಯಾರ್ಥಿ ವೇತನವನ್ನು ಕೊಡುವ ಮೂಲಕ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುವು ಮಾಡಿಕೊಟ್ಟರು .

ಈ ) ಸಂದರ್ಭಸಹಿತ ಸ್ವಾರಸ್ಯವನ್ನು ವಿವರಿಸಿ ,

1. “ ಅವರ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿಯನ್ನು ಸೇರಿಸಿತು .

” ಉ : ಆಯ್ಕೆ : – ಈ ವಾಕ್ಯವನ್ನು ಶ್ರೀ ಡಿ.ಎಸ್ . ಜಯಪ್ಪಗೌಡ ಅವರು ರಚಿಸಿರುವ ‘ ದಿವಾನ್ ಸರ್ ಎಂ . ವಿಶ್ವೇಶ್ವರಯ್ಯನವರ ಕಾರ್ಯಸಾಧನೆಗಳು ‘ ಎಂಬ ಕೃತಿಯಿಂದ ಆಯ್ದ ‘ ಭಾಗ್ಯಶಿಲ್ಪಿಗಳು ‘ ಎಂಬ ಗದ್ಯಭಾಗದಿಂದ ಆರಿಸಿಕೊಳ್ಳಲಾಗಿದೆ . ಸಂದರ್ಭ : -ವಿಶ್ವೇಶ್ವರಯ್ಯ ಅವರು ಪೂನಾದ ಮುಥಾ ಕಾಲುವೆಗೆ ನೀರಿನ ನೆಲೆಯಾಗಿದ್ದ ಪೀಪ್ ಜಲಾಶಯಕ್ಕೆ ಸ್ವತಃ ತಾವೇ ಅನ್ವೇಷಣೆ ಮಾಡಿದ ಸ್ವಯಂಚಾಲಿತ ಬಾಗಿಲುಗಳನ್ನು ಯಶಸ್ವಿಯಾಗಿ ಅಳವಡಿಸಿದರು ಎಂದು ಹೇಳುವ ಸಂದರ್ಭದಲ್ಲಿ ಲೇಖಕರು ಈ ಮಾತನ್ನು ಹೇಳುತ್ತಾರೆ .

ಸ್ವಾರಸ್ಯ : – ವಿಶ್ವೇಶ್ವರಯ್ಯ ಅವರಲ್ಲಿದ್ದ ಬುದ್ಧಿಶಕ್ತಿ ಹಾಗೂ ಅನ್ವೇಷಣಾ ಸಾಮರ್ಥ್ಯವನ್ನು ಈ ಮಾತಿನ ಮೂಲಕ ಸ್ವಾರಸ್ಯಪೂರ್ಣವಾಗಿ ಅಭಿವ್ಯಕ್ತಪಡಿಸಲಾಗಿದೆ .

2. “ ಮೈಸೂರು ಸಂಸ್ಥಾನಕ್ಕೆ ಮಾದರಿ ಮೈಸೂರು ‘ ಎಂಬ ಕೀರ್ತಿ ಪ್ರಾಪ್ತವಾಯಿತು . ”

ಉ : ಆಯ್ಕೆ : – ಈ ವಾಕ್ಯವನ್ನು ‘ ಭಾಗ್ಯಶಿಲ್ಪಿಗಳು ‘ ಗದ್ಯದಲ್ಲಿರುವ ಪಠ್ಯಪುಸ್ತಕ ಸಮಿತಿಯು ಸಂಗ್ರಹಿಸಿ ನೀಡಿರುವ ನಾಲ್ವಡಿ ಕೃಷ್ಣರಾಜ ಒಡೆಯರು ” ಭಾಗದಿಂದ ಆರಿಸಿಕೊಳ್ಳಲಾಗಿದೆ . ಸಂದರ್ಭ : – ಮೈಸೂರು ಸಂಸ್ಥಾನದ ಆಳ್ವಿಕೆ ನಾಲ್ವಡಿ ಕೃಷ್ಣರಾಜ ಒಡೆಯರ ಸುಪರ್ದಿಗೆ ಬಂದಿತು . ಆಗ ದಿವಾನರಾಗಿದ್ದ ಕೆ ಶೇಷಾದ್ರಿ ಅಯ್ಯರ್ ಅವರ ಸಹಕಾರದೊಂದಿಗೆ ನಾಲ್ವಡಿಯವರು ಮೈಸೂರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾಗಿ ಆಡಳಿತ , ಶಿಕ್ಷಣ , ಆರ್ಥಿಕ , ಸಾಮಾಜಿಕ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಬದಲಾವಣೆಗಳನ್ನು ತಂದರು .ಇದರಿಂದ ಇವರ ಕಾಲದಲ್ಲಿ ಮೈಸೂರು ಸಂಸ್ಥಾನವು ಯಾವ ಸ ೦ ಸ್ಥಾನವು ಕಾಣದ ಅಭಿವೃದ್ಧಿಸಾಧಿಸಿತು ಎಂದು ಹೇಳುವ ಸಂದರ್ಭದಲ್ಲಿ ಈ ಮಾತು ಬಂದಿದೆ .

ಸ್ವಾರಸ್ಯ : ನಾಲ್ವಡಿ ಕೃಷ್ಣರಾಜ ಒಡೆಯರ ದೂರದೃಷ್ಟಿ , ಅವರ ಅಭಿವೃದ್ಧಿಶೀಲ ಆಡಳಿತ ಎಂಬುದು ಈ ಮಾತಿಂದ ನಮಗೆ ತಿಳಿಯುತ್ತದೆ .

3. “ ಸಾಮಾಜಿಕ ಕಾನೂನುಗಳ ಹರಿಕಾರ . “

ಉ : ಆಯ್ಕೆ : – ಈ ವಾಕ್ಯವನ್ನು ‘ ಭಾಗ್ಯಶಿಲ್ಪಿಗಳು ‘ ಗದ್ಯದಲ್ಲಿರುವ ಪಠ್ಯಪುಸ್ತಕ ಸಮಿತಿಯು ಸಂಗ್ರಹಿಸಿ ನೀಡಿರುವ ನಾಲ್ವಡಿ ಕೃಷ್ಣರಾಜ ಒಡೆಯರು ” ಭಾಗದಿಂದ ಆರಿಸಿಕೊಳ್ಳಲಾಗಿದೆ . ಸಂದರ್ಭ : – ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆಗಳನ್ನು ವಿವರಿಸುವ ಸಂದರ್ಭದಲ್ಲಿ ಲೇಖಕರು ಈ ಮಾತನ್ನು ಹೇಳಿದ್ದಾರೆ . ನಾಲ್ವಡಿ ಕೃಷ್ಣರಾಜ ಒಡೆಯರು ಸ್ಥಳೀಯ ಸಂಸ್ಥೆಗಳನ್ನು ರಚಿಸಿ ಆಡಳಿತ ವಿಕೇಂದ್ರೀಕರಣ ಮಾಡಿದರು . ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವನ್ನಾಗಿ ರೂಪಿಸಿದರು . ‘ ಸಾಮಾಜಿಕ ಕಾನೂನುಗಳ ಹರಿಕಾರ ‘ ಎಂದು ಹೆಸರಾದರು , ಸಾಹಿತ್ಯ , ಸಂಗೀತ , ವಾಸ್ತುಶಿಲ್ಪಗಳ ಅಭಿವೃದ್ಧಿಗೆ ಒತ್ತು ನೀಡಿದರು .

ಸ್ವಾರಸ್ಯ : – ಸ್ವತಃ ರಾಜರಾಗಿ ಕೇಂದ್ರೀಕೃತ ವ್ಯವಸ್ಥೆಗೆ ಬದಲಾಗಿ ಆಡಳಿತದಲ್ಲಿ ವಿಕೇಂದ್ರೀಕೃತ ವ್ಯವಸ್ಥೆ ತಂದು ಸಾಮಾಜಿಕ ಕಾನೂನುಗಳನ್ನು ಜಾರಿಗೊಳಿಸಿದ ಒಡೆಯರಿಗೆ ಈ ಬಿರುದು ನೀಡಿರುವುದು ಒಪ್ಪುವಂತಾದ್ದಾಗಿದೆ .

4. “ ತಾವು ಕಡಿಮೆ ಮಾತನಾಡಿದ್ದೀರಿ ; ಹೆಚ್ಚು ಕೆಲಸ ಮಾಡಿದ್ದೀರಿ . ”

ಆಯ್ಕೆ : – ಈ ವಾಕ್ಯವನ್ನು ಶ್ರೀ ಡಿ.ಎಸ್ . ಜಯಪ್ಪಗೌಡ ಅವರು ರಚಿಸಿರುವ ‘ ದಿವಾನ್ ಸರ್ ಎಂ . ವಿಶ್ವೇಶ್ವರಯ್ಯನವರ ಕಾರ್ಯಸಾಧನೆಗಳು ಎಂಬ ಕೃತಿಯಿಂದ ಆಯ್ದ ‘ ಭಾಗ್ಯಶಿಲ್ಪಿಗಳು ‘ ಎಂಬ ಗದ್ಯಭಾಗದಿಂದ ಆರಿಸಿಕೊಳ್ಳಲಾಗಿದೆ . ಸಂದರ್ಭ : – ಸರ್.ಎಂ. ವೀಶ್ವೇಶ್ವರಯ್ಯ ಅವರ ಜನ್ಮ ಶತಮಾನೋತ್ಸವ ಸಮಾರಂಭ ಬೆಂಗಳೂರಿನಲ್ಲಿ ಜರುಗಿತು . ಆಗ ಅಂದಿನ ಪ್ರಧಾನಿಗಳಾಗಿದ್ದ ಜವಹರಲಾಲ್ ನೆಹರೂ ಅವರು ಸರ್.ಎಂ.ವಿ. ಅವರ ಬಗ್ಗೆ ಮಾತನಾಡುತ್ತಾ ಈ ಮಾತನ್ನು ಹೇಳಿದರು . “ ದುರದೃಷ್ಟವಶಾತ್ ಭಾರತೀಯರಾದ ನಾವು ಹೆಚ್ಚು ಮಾತನಾಡುವವರು ಮತ್ತು ನುಡಿದಂತೆ ನಡೆಯಲಾರದವರೆಂಬ ದೂಷಣೆಗೆ ಒಳಗಾಗಿದ್ದೇವೆ . ತಾವು ಈ ಮಾತಿಗೆ ಬಹುದೊಡ್ಡ ರೀತಿಯಲ್ಲಿ ಹೊರತಾಗಿದ್ದೀರಿ , ತಾವು ಕಡಿಮೆ ಮಾತನಾಡಿದ್ದೀರಿ ; ಹೆಚ್ಚು ಕೆಲಸ ಮಾಡಿದ್ದೀರಿ . ಅದನ್ನು ನಾವು ತಮ್ಮಿಂದ ಕಲಿಯೋಣ ” ಎಂದು ಆ ಸಂದರ್ಭದಲ್ಲಿ ಹೊಗಳಿದರು .

ಸ್ವಾರಸ್ಯ : – ಈ ಮಾತುಗಳಲ್ಲಿ ಸರ್.ಎಂ.ವಿ. ಅವರು ಸಲ್ಲಿಸಿದ ಅಘಾದ ಸೇವೆ ಇಡೀ ಭಾರತದಾದ್ಯಂತ ಎಲ್ಲ ಮನ ಸೆಳೆದಿತ್ತು ಎಂಬುದರ ಜೊತೆಗೆ ಅವರ ಕರ್ತವ್ಯ ನಿಷ್ಠೆ ಎಲ್ಲರಿಗೂ ಮಾದರಿಯಾಗಿತ್ತು ಎಂಬುದನ್ನು ತಿಳಿಯಬಹುದಾಗಿದೆ .

ಉ ) ಬಿಟ್ಟ ಸ್ಥಳವನ್ನು ಸರಿಯಾದ ಪದದಿಂದ ತುಂಬಿರಿ ,

1. ನಾಲ್ವಡಿ ಕೃಷ್ಣರಾಜ ಒಡೆಯರ್‌ರವರಿಗೆ ರೀಜೆಂಟರಾಗಿ ಕಾರ್ಯನಿರ್ವಹಿಸಿದವರು ಮಹಾರಾಣಿ ವಾಣಿವಿಲಾಸರವರು .

2. ೧೯೧೪ ರಲ್ಲಿ ಶಾಲಾ ಪ್ರವೇಶಕ್ಕೆ ಜಾತಿ ಪರಿಗಣನೆಯ ನಿಷೇಧವಾಯಿತು .

3. ವಿಶ್ವೇಶ್ವರಯ್ಯ ಅವರು ಮುಂಬೈ ಪ್ರಾಂತ್ಯದಲ್ಲಿ ಸಹಾಯಕ ಎಂಜಿನಿಯರ್ ಆಗಿ ಸೇವೆ ಪ್ರಾರಂಭಿಸಿದರು .

4. ಮುಂಬೈ ಪ್ರಾಂತ್ಯದ ಗವರ್ನರ್ ಆಗಿದ್ದ ಲಾರ್ಡ್ ಸಂಡ್ ಹರ್ಸ್ಟ್ ಅವರು ವಿಶ್ವೇಶ್ವರಯ್ಯ ಅವರನ್ನು ಮುಕ್ತಕಂಠದಿಂದ ಹಾಡಿ ಹೊಗಳಿದರು .

5. ಭಾರತ ಸರಕಾರವು ವಿಶ್ವೇಶ್ವರಯ್ಯನವರಿಗೆ ಭಾರತ ರತ್ನ ಎಂಬ ಪ್ರಶಸ್ತಿ ನೀಡಿ ಗೌರವಿಸಿತು .

ಭಾಷಾ ಚಟುವಟಿಕೆ

1 ) ಕೊಟ್ಟಿರುವ ಪದಗಳ ತತ್ಸಮ ತದ್ಭದ ಬರೆಯಿರಿ ,

ವಂಶ – ಬಂಚ , ಸ್ಥಾನ –– ತಾನ ( ತಾಣ ) , ಯಶ – ಜಸ , ಪಟ್ಟಣ – ಪತ್ತನ , ಕಾರ್ಯ- ಕಜ್ಜ

2 ) ನೀಡಿರುವ ಪದಗಳಲ್ಲಿ ಅನ್ಯದೇಶ್ಯ ಪದಗಳನ್ನು ಆರಿಸಿ ಬರೆಯಿರಿ .

ಅನ್ಯದೇಶ್ಯ ಪದಗಳು : ಡಿಪ್ಲೊಮಾ , ಅಜಮಾಯಿಷಿ , ದಿವಾನ , ಸೋಪು , ಕಾರ್ಖಾನೆ , ಕಾಗದ , ಕಚೇರಿ

ಇತರ ವಿಷಯಗಳು:

ಲಂಡನ್‌ ನಗರ ನೋಟ್ಸ್‌

ಶಬರಿ ಪಾಠದ ನೋಟ್ಸ್

Leave your vote

114 Points
Upvote Downvote

2 thoughts on “10 ನೇ ತರಗತಿ ಕನ್ನಡ ಭಾಗ್ಯಶಿಲ್ಪಿಗಳು ನೋಟ್ಸ್‌ | 10th Standard Kannada Bhagya Shilpigalu Notes

Leave a Reply

Your email address will not be published. Required fields are marked *

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.