Talakadu Information in Kannada | ತಲಕಾಡಿನ ಬಗ್ಗೆ ಮಾಹಿತಿ

Talakadu Information in Kannada, ತಲಕಾಡಿನ ಬಗ್ಗೆ ಮಾಹಿತಿ, About talakaadu in kannada, history of talakaadu, ತಲಕಾಡು ಪಂಚಲಿಂಗ ದರ್ಶನ ಬಗ್ಗೆ ಮಾಹಿತಿ

Talakadu Information in Kannada – ತಲಕಾಡಿನ ಬಗ್ಗೆ ಮಾಹಿತಿ

ತಲಕಾಡು

ಎತ್ತ್ತ್ತನೋಡಿದರತ್ತ್ತ ಮರಳರಾಶಿ, ಗಗನಚುಂಬಿಸುವ೦ಥ ಮರಳಗುಡ್ಡೆಗಳು, ಊರುತುಂಬ ಮರಳಿನದೇ ರಂಗವಲ್ಲಿ. ಗುಡಿ-ಗೋಪುರಗಳು, ಮನೆಮಠಗಳು, ಕಾಡು-ಮೇಡುಗಳು,ನಡೆವ ರಸ್ತೆ ಎಲ್ಲಕ್ಕೂ ಮರಳಿನದೇ ನಂಟು.

ಇದು ತಲಕಾಡಿನ ಪರಿ. ಕಾಲಿಟ್ಟಲ್ಲಿ ಮರಳು ಕೈಚಾಚಿದಲ್ಲಿ ಮರಳು ಇದು ತಲಕಾಡು ಇರುವ ರೀತಿ

ಹಿಂದೊಮ್ಮೆ ವಸಿಷ್ಠ ಕುಲದ ಸೋಮದತ್ತನೆಂಬ ಋಷಿಯು ಸಶರೀರ ಮೋಕ್ಷ ಬಯಸಿ ವಾರಣಾಸಿಯಲ್ಲಿ ತಪಸ್ಸು ಮಾಡುತ್ತಿದ್ದಾಗ ಕಾಶಿವಿಶ್ವೇಶ್ವರ ಪ್ರತ್ಯಕ್ಷನಾಗಿ ನಿನ್ನ ಉದ್ದೇಶ ಫಲಿಸಬೇಕೆಂದರೆ ಕಾಶಿಗಿಂತಲೂ ಮಿಗಿಲಾದ ದಕ್ಷಿಣ ಗಂಗೆಯೆಂದು ಹೆಸರಾಗಿರುವ ಕಾವೇರಿ ನದಿತೀರದ ತಲವನಪುರದ ಸಿದ್ದಾರಣ್ಯ ಕ್ಷೇತ್ರಕ್ಕೆ ಹೋಗುವಂತೆ ಹೇಳುತ್ತಾನೆ.

ಆಗ ಸೋಮದತ್ತನು ತನ್ನ ಶಿಷ್ಯರೊಡಗೂಡಿ ಸಿದ್ದಾರಣ್ಯ ಕ್ಷೇತ್ರಕ್ಕೆ ಬರುತ್ತಿದ್ದಂತೆಯೇ ಆನೆಗಳ ಹಿಂಡಿಗೆ ಸಿಲುಕಿ ಭಯಭೀತರಾಗಿ.

‘ಆನೆ…ಆನೆ…’ ಎಂದು ಕೂಗಿಕೊಂಡೇ ಗುರು ಶಿಷ್ಯರೆಲ್ಲಾ ಸಾವಿಗೀಡಾಗುತ್ತಾರೆ. ಸಾಯುವ ಸಮಯದಲ್ಲಿ ಆನೆಯ ಸ್ಮರಣೆಗೈದ ಅವರು ಮುಂದೆ ಸಿದ್ದಾರಣ್ಯ ಕ್ಷೇತ್ರದಲ್ಲೇ ಆನೆಗಳಾಗಿ ಜನ್ಮತಾಳುತ್ತಾರೆ.

ಈ ಆನೆಗಳು ಪ್ರತಿದಿನ ಗೋಕರ್ಣ ತೀರ್ಥದಲ್ಲಿ ಮಿಂದು ಕಮಲಪುಷ್ಪಗಳನ್ನು ಸೊಂಡಿಲಿನಿಂದ ತೆಗೆದುಕೊಂಡು ಹೋಗಿ ಅಲ್ಲಿಯೇ ಸಮೀಪದಲ್ಲಿದ್ದ ಶಾಲ್ಮಲ ವೃಕ್ಷ(ಬೂರಗದಮರ) ದ ಪೊದೆಯೊಂದಕ್ಕೆ ನಿತ್ಯ ಪೂಜೆ ಮಾಡುತ್ತಿರುತ್ತವೆ.

ಇದನ್ನು ಕಂಡು ಕುತೂಹಲಗೊಂಡ ತಲ ಮತ್ತು ಕಾಡ ಎಂಬ ಬೇಡರು ತಮ್ಮ ಕೊಡಲಿಗಳಿಂದ ಬೂರಗದ ಮರದ ಪೊದೆಯನ್ನು ಕತ್ತರಿಸಿದಾಗ ಕೊಡಲಿ ತಾಗಿ ಅಲ್ಲಿದ್ದ ಲಿಂಗದಿಂದ ರಕ್ತ ಚಿಮ್ಮುತ್ತದೆ. ಇದರಿಂದ ಭಯಗೊಂಡ ಬೇಡರು ನಡುಗತೊಡಗುತ್ತಾರೆ.

ಆಗ ಅಶರೀರವಾಣಿಯೊಂದು ಕೇಳಿಬರುತ್ತದೆ. ಆಶರೀರವಾಣಿಯ ಆಣತಿಯಂತೆ ಆ ಬೇಡರು ಬೂರಗದ ಮರದ ಎಲೆ ಮತ್ತು ಕಾಯಿಗಳನ್ನು ಜಜ್ಜಿ ಅರೆದು ಲಿಂಗಕ್ಕೆ ಹಚ್ಚಿದಾಗ ರಕ್ತ ಚಿಮ್ಮುತ್ತದೆ.

ಅದನ್ನು ಕುಡಿದ ತಲ ಮತ್ತು ಕಾಡರು ಹಾಗೂ ಆನೆ ಜನ್ಮ ತಾಳಿದ ಸೋಮದತ್ತ ಋಷಿ ಮತ್ತು ಅವನ ಶಿಷ್ಯರು ಮೋಕ್ಷ ಪಡೆಯುತ್ತಾರೆ. ಅಂದಿನಿಂದ ತಲ-ಕಾಡರೆಂಬ ಬೇಡರಿಂದಾಗಿ ತಲವನಪುರ “ತಲಕಾಡು” ಎಂದು ಹೆಸರಾದರೆ ಆನೆ ಜನ್ಮತಾಳಿ ಇಲ್ಲಿ ಮುಕ್ತ್ತಿಹೊಂದಿದ ಸೋಮದತ್ತ ಋಷಿಯಿಂದ ಸಿದ್ದಾರಣ್ಯ ಕ್ಷೇತ್ರವು ಗಜಾರಣ್ಯ ಕ್ಷೇತ್ರವಾಗಿ ಪ್ರಸಿದ್ಧಿಯಾಗುತ್ತದೆ.

ಹಾಗೆಯೇ ತನಗೆ ತಾನೆ ವೈದ್ಯ ಮಾಡಿಕೊಂಡ ಪರಶಿವನು ವೈದ್ಯನಾಥೇಶ್ವರನಾಗಿ ಇಲ್ಲಿ ನೆಲೆಗೊಂಡಿದ್ದಾನೆಂಬುದು ಪುರಾಣ ಪ್ರಸಿದ್ಧ ಕಥೆ

ತಲಕಾಡು ಪಂಚಲಿಂಗ ದರ್ಶನ

ವೈದ್ಯನಾಥೇಶ್ವರ:-

ತಲ ಮತ್ತು ಕಾಡ ಎಂಬ ಬೇಡರಿಗೆ ಮೋಕ್ಷ ಪ್ರದಾನಿಸಿದ ಪರಮೇಶ್ವರ ಇಲ್ಲಿ ತಾನೇ ಸ್ವಯಂ ವೈದ್ಯ ಮಾಡಿಕೊಂಡಿದ್ದನಂತೆ.ಇದರಿಂದ ಶಿವನನ್ನ ಇಲ್ಲಿ ವೈದ್ಯನಾಥೇಶ್ವನಾಗಿ ಪೂಜೆ ಮಾಡಲಾಗುತ್ತೆ. ಈ ಕಾರಣದದ ಇಲ್ಲಿ‌ ಪೂಜೆ ಮಾಡಿದರೆ ಸಕಲ ರೋಗ ರುಜಿನಗಳು ವಾಸಿಯಾಗುತ್ತದೆ ಎಂಬ ನಂಬಿಕೆ ಇದೆ. ಇದರಿಂದ ಇಲ್ಲಿ ವೈದ್ಯನಾಥನಿಗೆ ಅಗ್ರ ಪೂಜೆಯನ್ನು ಮಾಡಲಾಗುತ್ತೆ.

ಅರ್ಕನಾಥೇಶ್ವರ:

ಗ್ರಹಗಳಿಗೆಲ್ಲಾ ಅಧಿಪತಿಯಾಗಲು ಪುರಾಣದಲ್ಲಿ ಸೂರ್ಯನಿಂದ ಪೂಜಿಸಲ್ಪಟ್ಟ ಶಿವಲಿಂಗವೇ ಅರ್ಕನಾಥೇಶ್ವರನೆಂದು ಪ್ರಸಿದ್ಧಿಯಾಗಿದೆ. ಇದು ತಲಕಾಡಿನಲ್ಲಿ ವೈದ್ಯನಾಥೇಶ್ವರ ದೇಗುಲದ ಪೂರ್ವ ದಿಕ್ಕಿಗೆ ಮೂರು ಮೈಲಿ ದೂರದ ವಿಜಯಪುರದಲ್ಲಿದೆ‌‌.

ಇದು ಸಕಲ ಸಂಕಷ್ಟ ನಿವಾರಕ ಲಿಂಗವೆನಿಸಿದೆ. ಅರ್ಕನಾಥೇಶ್ವರನ ಅರ್ಚನೆಗೆ ಮಾಘ ಶುದ್ಧ ಸಪ್ತಮಿ ದಿನವು ಬಹಳ ಶ್ರೇಷ್ಠವಾಗಿದೆ ಎಂದು ಹೇಳಲಾಗುತ್ತದೆ‌.

ಪಾತಾಳೇಶ್ವರ :

ನಾಗಲೋಕದ ಚಕ್ರಾಧಿಪತ್ಯಕ್ಕಾಗಿ ವಾಸುಕಿಯಿಂದ ಪೂಜಿತಗೊಂಡಿರುವ ಈ ಶಿವಲಿಂಗವೇ ಪಾತಾಳೇಶ್ವರ. ವಾಸುಕೀಶ್ವರನೆಂಬುವುದು ಪಾತಾಳೇಶ್ವರನ ಮತ್ತೊಂದು ಹೆಸರಾಗಿದೆ.

ಈ ದೇವಾಲಯ ಬೇರೆ ದೇವಾಲಯಗಳಿಗಿಂತ ಆಳದಲ್ಲಿರುವ ಕಾರಣ ಪಾತಾಳೇಶ್ವರನೆಂದೇ ಹೆಸರಾಗಿದೆ. ಇದರ ಪೂಜೆಗೆ ಶ್ರಾವಣ ಶುದ್ಧ ಪಂಚಮಿ ಅತ್ಯಂತ ಶ್ರೇಷ್ಠ ದಿನವಾಗಿದೆ. ಈ ಲಿಂಗವು ಪ್ರತಿದಿನ ಐದು ಬಣ್ಣಗಳನ್ನು ತಾಳುತ್ತದೆಂದು ಹೇಳಲಾಗುತ್ತದೆ.

ಮರಳೇಶ್ವರ :

ತಲಕಾಡಿನ ಮರಳಿಗೆಲ್ಲ ಒಡೆಯನೆಂದೆ ಮರಳೇಶ್ವರನನ್ನು ಕರೆಯಲಾಗುತ್ತೆ. ಮರಳೇಶ್ವರ ಬ್ರಹ್ಮನಿಂದ ಪೂಜಿಸಲ್ಪಟ್ಟವನ್ನು ಎಂದು‌ ಹೇಳಲಾಗುತ್ತೆ. ಬ್ರಹ್ಮನಿಗೆ ಪ್ರತ್ಯಕ್ಷನಾಗಿ ವರನೀಡಿದ ಎಂದು ಹೇಳಲಾಗುವುದು ಇದರಿಂದ ಮರಳೇಶ್ವರನಿಗೆ ಸೈತಕೇಶ್ವರನೆಂಬ ಕರೆಯಲಾಗುತ್ತದೆ. ಇದರಿಂದ ಈ ದೇವಾಲಯದಲ್ಲಿ ಪೂಜೆ ಮಾಡಿ ಬೇಡಿಕೊಂಡರೆ ಬೇಡಿದ ವರವನ್ನು ಕೊಡುತ್ತಾನೆ ಎಂಬ ನಂಬಿಕೆ‌ ಸಹ ಇದೆ.

ಮಲ್ಲಿಕಾರ್ಜುನೇಶ್ವರ :

ಕಾಮಧೇನುವಿನಿಂದ ಪೂಜೆಗೊಳ್ಳುತ್ತಿದ್ದ ಶಿವಲಿಂಗವೇ ಮಲ್ಲಿಕಾರ್ಜುನೇಶ್ವರ ಎಂದು ಹೇಳುತ್ತಾರೆ. ಮಲ್ಲಿಕಾರ್ಜುನೇಶ್ವರ
ಮುನ್ನೂರು ಅಡಿ ಎತ್ತರದ ಮುಡುಕುತೊರೆ ಬೆಟ್ಟದಲ್ಲಿ ನೆಲೆಸಿದ್ದಾನೆ. ಈತ ಕೂಡ ಕೇಳಿದ ವರವನ್ನ ಕೊಡುತ್ತಾನೆ ಎಂದು ಭಕ್ತರ ನಂಬಿಕೆಯಾಗಿದೆ. ಇಲ್ಲಿ ಕಾವೇರಿ ನದಿಯು ನಾಲ್ಕು ದಿಕ್ಕುಗಳಲ್ಲಿ ಹರಿಯುವುದು ಕ್ಷೇತ್ರದ ವಿಶೇಷವಾಗಿದೆ

Talakadu Information in Kannada

ಇತರ ವಿಷಯಗಳು

ಮೈಸೂರು ಅರಮನೆ ಬಗ್ಗೆ ಮಾಹಿತಿ

ವಿಜಯನಗರ ಸಾಮ್ರಾಜ್ಯದ ಇತಿಹಾಸ

Leave your vote

18 Points
Upvote Downvote

Leave a Reply

Your email address will not be published. Required fields are marked *

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.

rtgh